HomeKarnatakaವಿಧಾನ ಪರಿಷತ್ 4 ಸ್ಥಾನಗಳಿಗೆ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ವಿಧಾನ ಪರಿಷತ್ 4 ಸ್ಥಾನಗಳಿಗೆ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಚುನಾವಣಾ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ. ರಾಜ್ಯದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ

ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29, ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅಕ್ಟೋಬರ್ 9ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಚುನಾವಣಾ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ಪ್ರಮುಖ ದಿನಾಂಕಗಳು:

ಅಧಿಸೂಚನೆ ಸೆ. 29

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅ. 6

ನಾಮಪತ್ರ ಪರಿಶೀಲನೆ ಅ. 7

ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅ. 9

ಮತದಾನ ಅ. 23

ಮತ ಎಣಿಕೆ ಅ. 27

ಚುನಾವಣಾ ಪ್ರಕ್ರಿಯೆ ಪೂರ್ಣ ಅ. 31

ಆಗ್ನೇಯ ಪದವೀಧರ ಕ್ಷೇತ್ರದ ಚಿದಾನಂದ ಎಂ ಗೌಡ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶಿಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಸದಸ್ಯತ್ವ ಅವಧಿ ನವೆಂಬರ್ 11ರಂದು ಅಂತ್ಯವಾಗಲಿದೆ.

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: 90,460 ಮತದಾರರು ನೋಂದಣಿ

ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ಪದವೀಧರರು ಮಾತ್ರ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ನವೆಂಬರ್ 1, 2025 ರ ಅರ್ಹತಾ ದಿನಾಂಕದನ್ವಯ ಇಲ್ಲಿಯವರೆಗೆ ಒಟ್ಟು 90,460 ಮತದಾರರು ನೋಂದಾಯಿಸಿಕೊಂಡಿರುತ್ತಾರೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರು 30 ವರ್ಷಗಳಿಗೆ ಕಡಿಮೆ ಇರಬಾರದು. ಉಮೇದುವಾರರು ಕರ್ನಾಟಕದ ಯಾವುದಾದರೂ ವಿಧಾನ ಸಭಾ ಕ್ಷೇತ್ರದ ಮತದಾರರಾಗಿರಬೇಕು. ಉಮೇದುವಾರರು  ಯಾವುದೇ ಕಾನೂನಿನಡಿ ಅನರ್ಹರಾಗಿರಬಾರದು. ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ನೋಂದಾಯಿತರಾದ ಪದವೀಧರರು ಮಾತ್ರ ಮತದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಚುನಾವಣೆಗೆ ಡಿ-ನೋವೋ ಪದ್ಧತಿಯನ್ವಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 137 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 128 ಮೂಲ ಹಾಗೂ 9 ಹೆಚ್ಚುವರಿ ಮತಗಟ್ಟೆಗಳು ಸೇರಿವೆ. ಭಾರತ ಚುನಾವಣಾ ಆಯೋಗವು ಸೆ.22 ರಂದು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಂದಿನಿಂದಲೇ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಮಾರ್ಗದರ್ಶನಕ್ಕಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಹೇಳಿದ್ದಾರೆ.

 ಚುನಾವಣೆಗೆ ಸ್ಪರ್ಧಿಸಲು ಬಯಸುವ ಉಮೇದುವಾರರು ನಾಮಪತ್ರ ನಮೂನೆ-2ಇ, ಪರಿಷ್ಕøತ ಪ್ರಮಾಣ ಪತ್ರ (ಅಫಿಡವಿಟ್) ನಮೂನೆ-26 ಸೇರಿದಂತೆ ಇತರ ನಮೂನೆಗಳನ್ನು ಸೆಪ್ಟೆಂಬರ್ 29, 2026 ರಿಂದ ಧಾರವಾಡ ಜಿಲ್ಲಾಧಿಕಾರಿಗಳವರ ಕಚೇರಿಯ ವೇಳೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6, 2026 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಧಾರವಾಡ ಅವರಿಗೆ ಸಲ್ಲಿಸಬಹುದು.

ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 34ರ ಅನ್ವಯ ಸಾಮಾನ್ಯ ವರ್ಗದ ಉಮೇದುವಾರರು ರೂ. 10,000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಮೇದುವಾರರು ರೂ. 5,000 ಠೇವಣಿಯನ್ನು ನಾಮಪತ್ರ ಸಲ್ಲಿಕೆ ಕಾಲಕ್ಕೆ ಠೇವಣಿ ಇಡಬೇಕು.

ಉಮೇದುವಾರರು ನಾಮಪತ್ರದೊಂದಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿನ ಎಲ್ಲ ಅಂಕಣಗಳನ್ನು ಕಡ್ಡಾಯವಾಗಿ ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಯಾವುದೇ ಅಂಕಣವನ್ನು ಖಾಲಿ ಬಿಟ್ಟಲ್ಲಿ ನಾಮಪತ್ರ ಪರಿಶೀಲನೆ ವೇಳೆ ತಿರಸ್ಕøತವಾಗುವ ಸಾಧ್ಯತೆ ಇದೆ. ಪ್ರಮಾಣ ಪತ್ರ, ನಮೂನೆ ‘ಎಎ’ ಹಾಗೂ ‘ಬಿಬಿ’ಗಳನ್ನು ನಾಮಪತ್ರದೊಂದಿಗೆ ಸಲ್ಲಿಸದೇ ಇದ್ದಲ್ಲಿ, ಅವುಗಳನ್ನು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಅಕ್ಟೋಬರ್ 6, 2026 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ಸಲ್ಲಿಸಬೇಕು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular