HomeKarnatakaರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಮುಂಗಾರು ಬಿತ್ತನೆ ಸಮಯದಲ್ಲಿ ಅನ್ನದಾತ ಸಂಕಷ್ಟಕ್ಕೆ ಸಿಲುಕುವ...

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಮುಂಗಾರು ಬಿತ್ತನೆ ಸಮಯದಲ್ಲಿ ಅನ್ನದಾತ ಸಂಕಷ್ಟಕ್ಕೆ ಸಿಲುಕುವ ಆತಂಕ

ಬೆಂಗಳೂರು: ಈಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಪ್ರವೇಶಿಸಲಿದ್ದು, ಆದರೆ ರಾಜ್ಯದಲ್ಲಿ ರಸಗೊಬ್ಬರ ಅಭಾವ ಉಂಟಾಗಿದ್ದು, ಮುಂಗಾರು ಬಿತ್ತನೆ ಸಮಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರಣಕ್ಕೆ ಇಂಧನ ಕೊರತೆ ಎದುರಾಗಿದ್ದು ಇದರ ಬೆನ್ನಲ್ಲೇ ರಸಗೊಬ್ಬರ ಕೊರತೆ ಕೂಡ ಉಂಟಾಗಿದೆ. ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

14 ಸಾವಿರ ಟನ್ ಯೂರಿಯಾ ಕೊರತೆಯೂ ಇರುವುದಾಗಿ ತಿಳಿಸಿರುವ ಸಚಿವ ಚಲುವರಾಯಸ್ವಾಮಿ, ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ರಸಗೊಬ್ಬರ ವಿತರಣೆಯಲ್ಲಿ ಅಕ್ರಮ, ದಾಸ್ತಾನು ಹಾಗೂ ಬೇರೆಡೆಗೆ ತಿರುಗಿಸುವಿಕೆ ತಪ್ಪಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿಗಾವಹಿಸಲು ಸೂಚಿಸಲಾಗಿದೆ. ಜೂನ್‌ನಲ್ಲಿ ಮುಂಗಾರು ಆರಂಭವಾಗುವ ನಿರೀಕ್ಷೆಯಿದ್ದು, ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಿದ್ಧತೆಗಳು ನಡೆಯುತ್ತಿವೆ. ನಿಜವಾದ ರೈತರಿಗೆ ಮಾತ್ರ ರಸಗೊಬ್ಬರ ವಿತರಣೆ ಆಗುವಂತೆ FRUITS ಐಡಿ ಆಧಾರಿತ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಎಂದು ತಿಳಿಸುದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ರೀತಿಯ ರಸಗೊಬ್ಬರ ಹಂಚಿಕೆ ಮಾಡಿದೆ. ಇದರಲ್ಲಿ 11.10 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 4 ಲಕ್ಷ ಮೆಟ್ರಿಕ್ ಟನ್ ಡಿಎಪಿ, 2.12 ಲಕ್ಷ ಮೆಟ್ರಿಕ್ ಟನ್ ಎಂಒಪಿ, 11.88 ಲಕ್ಷ ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರ ಹಾಗೂ 0.95 ಲಕ್ಷ ಮೆಟ್ರಿಕ್ ಟನ್ ಎಸ್‌ಎಸ್‌ಪಿ ಸೇರಿವೆ. ಆದರೆ ಈ ವರ್ಷ ಯೂರಿಯಾ ಆರಂಭಿಕ ದಾಸ್ತಾನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬಹಳ ಕಡಿಮೆಯಾಗಿದೆ. 2023ರಲ್ಲಿ 3.91 ಲಕ್ಷ ಮೆಟ್ರಿಕ್ ಟನ್ ಹಾಗೂ 2024ರಲ್ಲಿ 5.41 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಆರಂಭಿಕ ದಾಸ್ತಾನು ಇದ್ದರೆ, ಈ ವರ್ಷ ಅದು ಕೇವಲ 2.80 ಲಕ್ಷ ಮೆಟ್ರಿಕ್ ಟನ್‌ಗೆ ಇಳಿದಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿರಾಜ್ಯವು 4.02 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇಟ್ಟಿದ್ದರೂ, ಕೇಂದ್ರದಿಂದ ಕೇವಲ 2.54 ಲಕ್ಷ ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಇದರಿಂದ 1.48 ಲಕ್ಷ ಮೆಟ್ರಿಕ್ ಟನ್ ಕೊರತೆ ಉಂಟಾಗಿದೆ. ಇದರಲ್ಲಿ 0.38 ಲಕ್ಷ ಮೆಟ್ರಿಕ್ ಟನ್ ಡಿಎಪಿ ಹಾಗೂ 0.14 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊರತೆ ಸೇರಿದೆ. ಅದೇ ರೀತಿ ಮೇ ತಿಂಗಳಲ್ಲಿ 4.54 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದ್ದರೂ, ಇದುವರೆಗೆ ಕೇಂದ್ರವು ಕೇವಲ 1.77 ಲಕ್ಷ ಮೆಟ್ರಿಕ್ ಟನ್ ಪೂರೈಕೆ ಮಾಡಿದೆ. ಇನ್ನೂ 2.77 ಲಕ್ಷ ಮೆಟ್ರಿಕ್ ಟನ್ ಬಾಕಿಯಿದೆ. ಇದರಲ್ಲಿ 0.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಹಾಗೂ 0.78 ಲಕ್ಷ ಮೆಟ್ರಿಕ್ ಟನ್ ಡಿಎಪಿ ಪೂರೈಕೆ ಆಗಬೇಕಿದೆ. ಈ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸದಿದ್ದರೆ ಬಿತ್ತನೆ ಸಮಯದ ಅವಧಿಯಲ್ಲಿ ರೈತರು ಗಂಭೀರ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular