HomeJobsಉದ್ಯೋಗ ವಾರ್ತೆ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ 121 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ...

ಉದ್ಯೋಗ ವಾರ್ತೆ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ 121 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೈಸೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2026-27ನೇ ಸಾಲಿನಲ್ಲಿ 120+1 ಹಿಂಬಾಕಿ ಸೇರಿದಂತೆ ಒಟ್ಟು 121 ಅರಣ್ಯ ವೀಕ್ಷಕ (Forest Watcher) ಗ್ರೂಪ್‌ ‘ಡಿ’ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯ ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆಯ್ಕೆ ಪ್ರಾಧಿಕಾರವು ಈ ಕುರಿತು ತಿದ್ದುಪಡಿ-II ಪ್ರಕಟಣೆ ಹೊರಡಿಸಿದೆ. ಆಡಳಿತಾತ್ಮಕ ಕಾರಣಗಳಿಂದ ಮೂಲ ಅಧಿಸೂಚನೆಯ ಕಂಡಿಕೆ 10ರಲ್ಲಿ ನೀಡಲಾಗಿದ್ದ ಅರ್ಜಿ ಸಲ್ಲಿಸುವ ವಿಧಾನಕ್ಕೆ ಭಾಗಶಃ ತಿದ್ದುಪಡಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ: 08 ಸೆಪ್ಟೆಂಬರ್ 2026

    📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
    APP ತೆರೆಯಿರಿ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2026, ರಾತ್ರಿ 11:59:59ರವರೆಗೆ

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03 ಅಕ್ಟೋಬರ್ 2026

  • ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ: 04 ಅಕ್ಟೋಬರ್‌ನಿಂದ 08 ಅಕ್ಟೋಬರ್ 2026ರವರೆಗೆ

ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅರ್ಜಿ ಶುಲ್ಕವನ್ನು ಮೂಲ ಅಧಿಸೂಚನೆಯ ಕಂಡಿಕೆ 1.6ರಲ್ಲಿ ನಿಗದಿಪಡಿಸಿರುವ ವಿಧಾನದಲ್ಲಿ ಪಾವತಿಸಬೇಕು.

ಗಮನಿಸಿ: ಮೂಲ ಅಧಿಸೂಚನೆಯಲ್ಲಿರುವ ಇತರೆ ಎಲ್ಲಾ ನಿಯಮ, ಅರ್ಹತೆ ಮತ್ತು ಷರತ್ತುಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅವು ಯಥಾವತ್ತಾಗಿ ಜಾರಿಯಲ್ಲಿರುತ್ತವೆ.

ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮಕ್ಕೆ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಲಬುರಗಿ, ಬಳ್ಳಾರಿ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರಿನ ಕಲಿಕೆ ಟಾಟಾ ಟ್ರಸ್ಟ್ ಸಹಯೋಗದಲ್ಲಿ ಜಾರಿಯಾಗುತ್ತಿರುವ ‘ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮ’ದಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳು ಸಂಪೂರ್ಣವಾಗಿ 2 ವರ್ಷಗಳ ಅವಧಿಗೆ ಗೌರವಧನ ಆಧಾರಿತ ತಾತ್ಕಾಲಿಕ ಹುದ್ದೆಗಳಾಗಿರಲಿವೆ.

ಹುದ್ದೆಯ ಹೆಸರು: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು

ಹುದ್ದೆಗಳ ಸಂಖ್ಯೆ: 02

ಮಾಸಿಕ ಗೌರವಧನ: ರೂ. 30,000 ಹಾಗೂ ಪ್ರಯಾಣ ಭತ್ಯೆ ರೂ. 5,000 ಮತ್ತು ಇತರೆ ಸೌಲಭ್ಯಗಳು.

ವಯೋಮಿತಿಯು ಗರಿಷ್ಠ 45 ವರ್ಷ ಮೀರಬಾರದು. ಅಭ್ಯರ್ಥಿಗಳು ಕಡ್ಡಾಯವಾಗಿ ಎಂ.ಎ. ಸಮಾಜಶಾಸ್ತç ಅಥವಾ ಸಮಾಜಕಾರ್ಯ (ಎಂಎಸ್‌ಡಬ್ಲೂö್ಯ) ಸ್ನಾತಕೋತ್ತರ ಪದವಿ ಹೊಂದಿರಬೇಕು.

ಶಾಲಾ ಪೂರ್ವ ಶಿಕ್ಷಣ, ಮಕ್ಕಳ ಕಲಿಕಾ/ಬೋಧನಾ ಕ್ಷೇತ್ರ (ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ) ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 4 ರಿಂದ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವವಿರಬೇಕು. ಕಂಪ್ಯೂಟರ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ತಂತ್ರಾAಶ ಬಳಕೆ ಜ್ಞಾನ ಹೊಂದಿರಬೇಕು.

ಕನ್ನಡ, ಇಂಗ್ಲಿಷ್ ಹಾಗೂ ಸ್ಥಳೀಯ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯ ಹೊಂದಿದ್ದು, ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ನಿರಂತರ ಭೇಟಿ ನೀಡುವ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ ಹಾಗೂ ನಿಗದಿತ ವಿದ್ಯಾರ್ಹತೆ ಮತ್ತು ಅನುಭವದ ದಾಖಲೆಗಳೊಂದಿಗೆ ಅಕ್ಟೋಬರ್ 12 ರ ಸಂಜೆ 5.30 ರೊಳಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೇವಾನಿಕೇತನ ಆವರಣ, ವಾಲ್ಮೀಕಿ ವೃತ್ತದ / ಎಸ್.ಪಿ. ಸರ್ಕಲ್ ಹತ್ತಿರ, ದೇವಿನಗರ, ಬಳ್ಳಾರಿ – 583102.

ಹೆಚ್ಚಿನ ಮಾಹಿತಿಗಾಗಿ ದೂ.08392-266219, ಮೊ.9741259803, 9980337731 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular