ಕರ್ನಾಟಕ ಸುವರ್ಣ ಮಹೋತ್ಸವ ಆಚರಣೆ : ಲಾಂಛನದ ಮಾದರಿ ಆಹ್ವಾನ

ಬೆಂಗಳೂರು : ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷೀಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೂಂದು ವಿಶೇಷ ಮೆರಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕøತಿಯನ್ನು ಬಿಂಭಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ (ಲೋಗೋ) ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ.25,000/-ಗಳ ಬಹುಮಾನ ನಿಗದಿಪಡಿಸಲಾಗಿದೆ.

ಲಾಂಛನ (ಲೋಗೋ) ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್ 30, 2023 ರ  ಅವಕಾಶವಿದ್ದು, ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ http://www.kannadasiri.karnataka.gov.in ದಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read