HomeKarnatakaದೀಪಾವಳಿ ಹಬ್ಬಕ್ಕೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ; ಈ ನಿಯಮಗಳ...

ದೀಪಾವಳಿ ಹಬ್ಬಕ್ಕೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ; ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ಪಟಾಕಿ ಸಿಡಿಸುವುದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ದೀಪಾವಳಿ ಆಚರಣೆಯ ಕುರಿತು ಜಾಗೃತಿ ಮೂಡಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ನವೆಂಬರ್ 6, 2026ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ಸುಟ್ಟ ಗಾಯಗಳು, ಕಣ್ಣಿನ ಸಮಸ್ಯೆಗಳು, ಶ್ರವಣದೋಷ ಹಾಗೂ ಇತರ ಅಪಘಾತಗಳ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಪಟಾಕಿಗಳ ಹೊಗೆಯಿಂದ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ಉಂಟಾಗುವುದಲ್ಲದೆ, ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರ ಸೂಚನೆ ನೀಡಿದೆ.

ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳ ಮುಖ್ಯಸ್ಥರ ಜವಾಬ್ದಾರಿಗಳು:

ಶಾಲಾ-ಕಾಲೇಜು ಪ್ರಾರ್ಥನಾ ಅವಧಿಯಲ್ಲಿ ಮತ್ತು ಪ್ರತ್ಯೇಕ ಅವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಈ ಕೆಳಕಂಡ ಅಂಶಗಳಂತೆ ಸುರಕ್ಷಿತ ದೀಪಾವಳಿ ಆಚರಿಸುವ ಬಗ್ಗೆ ಜಾಗೃತಿ ಮೂಡಿಸಲು ಕ್ರಮವಹಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಸುರಕ್ಷಿತ ಕ್ರಮಗಳ ಅನುಸರಣೆಯಿಂದ ವಿದ್ಯಾರ್ಥಿಗಳ ಸುರಕ್ಷತೆ, ನೆರೆಹೊರೆಯವರ ಸುರಕ್ಷತೆ, ಪರಿಸರದ ರಕ್ಷಣೆ ಬಗ್ಗೆ ಅರಿವು ಮೂಡಿಸುವುದು.

  • ಪಟಾಕಿಗಳ ಬದಲಾಗಿ ದೀಪಗಳು ಮತ್ತು ಪರಿಸರ ಸ್ನೇಹಿ ಅಲಂಕಾರಗಳ ಮೂಲಕ ಹಬ್ಬ ಆಚರಿಸಲು ಪ್ರೋತ್ಸಾಹಿಸುವುದು.

  • ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸುವಾಗ ಅನುಸರಿಸಬೇಕಾದ ಸುರಕ್ಷತಾ ಮಾರ್ಗಸೂಚಿಗಳ ಬಗ್ಗೆ ಅರಿವು ಮೂಡಿಸುವುದು.

  • ಪಟಾಕಿಗಳಿಂದ ಸಂಭವಿಸಬಹುದಾದ ಅಪಘಾತಗಳು ಮತ್ತು ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದು.

  • ಪಟಾಕಿ ಸಿಡಿತದಿಂದ ಸಂಭವಿಸಿರುವ ಅವಘಡಗಳ ನಿದರ್ಶನಗಳನ್ನು ನೀಡುವ ಮೂಲಕ ಜಾಗೃತಿ ಮೂಡಿಸುವುದು.

  • ಶಾಲೆಯ ಸೂಚನಾ ಫಲಕದಲ್ಲಿ ದೀಪಾವಳಿ ಸುರಕ್ಷತಾ ಸಂದೇಶಗಳನ್ನು ಪ್ರದರ್ಶಿಸುವುದು.

  • ಪಟಾಕಿ ಸಿಡಿಸುವ ಸಂದರ್ಭದಲ್ಲಿ ಉಂಟಾಗುವ ಅಪಘಾತಗಳಾದಲ್ಲಿ ಅನುಸರಿಸಬೇಕಾದ ಪ್ರಥಮ ಚಿಕಿತ್ಸೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

  • ಸುರಕ್ಷಿತ ದೀಪಾವಳಿ ಆಚರಣೆಗೆ ಮಕ್ಕಳ ಸುರಕ್ಷತೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವುದು.

SDMC, CDC ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮ

ದೀಪಾವಳಿಗೂ ಮುನ್ನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ (CDC) ಸಹಕಾರದೊಂದಿಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ.

ಇದರಲ್ಲಿ ಪ್ರಮುಖವಾಗಿ:

  1. ಸುರಕ್ಷತಾ ಪ್ರತಿಜ್ಞೆ: ಎಲ್ಲಾ ವಿದ್ಯಾರ್ಥಿಗಳಿಂದ ಸುರಕ್ಷಿತ ದೀಪಾವಳಿ ಆಚರಣೆಯ ಪ್ರತಿಜ್ಞೆ ಮಾಡಿಸುವುದು.

  2. ಪರಿಸರ ಜಾಗೃತಿ: ಮಣ್ಣಿನ ದೀಪಗಳು ಮತ್ತು ಪರಿಸರ ಸ್ನೇಹಿ ಆಚರಣೆಗೆ ಪ್ರೋತ್ಸಾಹ ನೀಡುವುದು.

  3. ಪೋಷಕರಿಗೆ ಸಂದೇಶ: ಶಾಲೆಯ ವಾಟ್ಸಾಪ್ ಗುಂಪುಗಳ ಮೂಲಕ ಸುರಕ್ಷತಾ ಸೂಚನೆಗಳನ್ನು ರವಾನಿಸುವುದು.

  4. ಪ್ರಥಮ ಚಿಕಿತ್ಸೆ ಅರಿವು: ಪಟಾಕಿ ಸಿಡಿಸುವಾಗ ಅಪಘಾತ ಸಂಭವಿಸಿದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸುವುದು.

ಸುಟ್ಟ ಗಾಯವಾದರೆ ತಕ್ಷಣ ಏನು ಮಾಡಬೇಕು?

ಪಟಾಕಿ ಸಿಡಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸುಟ್ಟ ಗಾಯಗಳಾದರೆ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳಂತೆ ಪ್ರಥಮ ಚಿಕಿತ್ಸೆ ನೀಡಿ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಗಂಭೀರ ಗಾಯಗಳಾದ ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಇಲಾಖೆ ಸೂಚಿಸಿದೆ.

ಎಲ್ಲಾ ಶಾಲೆಗಳಿಗೂ ಮಾರ್ಗಸೂಚಿ ಅನುಷ್ಠಾನಗೊಳಿಸಲು ಸೂಚನೆ

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಈ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಸುತ್ತೋಲೆಯ ಮಾಹಿತಿಯನ್ನು ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರ ಮೂಲಕ ಪೋಷಕರಿಗೂ ತಲುಪಿಸುವಂತೆ ತಿಳಿಸಲಾಗಿದೆ.

“ಮಕ್ಕಳ ಸುರಕ್ಷತೆಯೇ ಮೊದಲ ಆದ್ಯತೆ – ಅಪಘಾತ ಮುಕ್ತ ದೀಪಾವಳಿಯೇ ನಮ್ಮ ಸಂಕಲ್ಪ” ಎಂಬ ಸಂದೇಶದೊಂದಿಗೆ ಸುರಕ್ಷಿತ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಸರ್ಕಾರ ಕರೆ ನೀಡಿದೆ.

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular