ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ ಗುಡ್ ನ್ಯೂಸ್ ನೀಡಿದೆ. ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗುವಂತೆ ಜಾರಿಗೆ ಬರಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು,2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.

