HomeKarnatakaBREAKING NEWS: ಕರ್ನಾಟಕ ಸರ್ಕಾರದ ನೂತನ CS ಆಗಿ ಡಾ.ಶಾಲಿನಿ ರಜನೀಶ್ ನೇಮಕ

BREAKING NEWS: ಕರ್ನಾಟಕ ಸರ್ಕಾರದ ನೂತನ CS ಆಗಿ ಡಾ.ಶಾಲಿನಿ ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮನ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಶಾಲಿನಿ ರಜನೀಶ್ ಅವರನ್ನು ಮುಖ್ಯಕಾರ್ಯದರ್ಶಿಯನ್ನಾಗಿ ನೇಮಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಇನ್ನೈದು ದಿನಗಳಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ನಿವೃತ್ತಿಯಾಗಲಿದ್ದಾರೆ. ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಂದಿನ ಸಿಎಸ್ ನೇಮಕದ ಬಗ್ಗೆ ಸಿಎಂ ಸಿದ್ದರಾಮಯ್ಯ ತೀರ್ಮಾನಕ್ಕೆ ಬಿಟ್ಟಿದ್ದೆವು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡುವ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular