HomeKarnatakaGOOD NEWS: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕಾತಿ

GOOD NEWS: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕಾತಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬುಧವಾರ 650 ಸಹಾಯಕ ಪ್ರಾಧ್ಯಾಪಕರು ಮತ್ತು 1,200 ದಾದಿಯರನ್ನು ನೇಮಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಡಿಯಲ್ಲಿ ಬರುವ 33 ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಖಾಲಿ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಕೆಇಎಗೆ ದಾರಿ ಮಾಡಿಕೊಡಲು ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular