ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಕೊಂಚ ತಣ್ಣಗಾಗಿತ್ತು. ಇದರ ನಡುವೆಯೇ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಕ್ಟೋಬರ್ 18 ರವರೆಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿಯೂ ಮಳೆ ಅಬ್ಬರ ಜೋರಾಗಲಿದೆ.
ಗಾಳಿಯ ವೇಗವು ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ ಸಿಡಿಲು ಅಪ್ಪಳಿಸುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ಕೊನೆಗೊಳ್ಳುವ ಮುನ್ಸೂಚನೆ ಇದೆ. ಇದೇ ಕಾರಣಕ್ಕೆ ಕೇಂದ್ರ ಹಾಗೂ ಪೂರ್ವ ಭಾರತದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.