ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಣ ಬಿಸಿಲು ಆರಂಭವಾಗಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಐದು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಏಪ್ರಿಲ್ 16ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಹಾಗೂ ನಾಳೆ ಹಗುರ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಧಾರವಾಡ, ಗದಗ, ಬೆಳಗಾವಿ, ಚಿತ್ರದುರ್ಗ, ಕೋಲಾರ, ತುಮಕೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ.