HomeLatest NewsBIG NEWS: ವಾಯುಭಾರ ಕುಸಿತ: ಗುಡುಗು ಸಹಿತ ಭಾರಿ ಮಳೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್...

BIG NEWS: ವಾಯುಭಾರ ಕುಸಿತ: ಗುಡುಗು ಸಹಿತ ಭಾರಿ ಮಳೆ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

ನಿನ್ನೆಯಿಂದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಮೇ 27ರವರೆಗೆ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಜೊತೆಗೆ ಶಕ್ತಿ ಚಂಡಮಾರುತ ಕೂಡ ಕರಾವಳಿ ಭಾಗಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular