HomeKarnatakaRAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ

RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಈ ನಡುವೆ ಮುಂದಿನ ಒಂದು ವರಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ವರುಣಾರ್ಭಟ ಹೆಚ್ಚಲಿದೆ.

ಧಾರವಾಡ, ಗದಗ, ಹಾವೇರಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular