HomeKarnatakaRAIN ALERT: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕು: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಅಲರ್ಟ್...

RAIN ALERT: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕು: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮತ್ತಷ್ಟು ಚುರುಕಾಗಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಗದಗ, ಬಾಗಲಕೋಟೆ, ಕೊಡಗು, ದಾವಣಗೆರೆ, ಚಿತ್ರದುರ್ಗ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಮತ್ತಷ್ಟು ಅಬ್ಬರಿಸಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲೆಗಳಲ್ಲಿ ಸಾಧಾರಾಣ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular