HomeLatest NewsBIG NEWS: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ

BIG NEWS: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ

ಮಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.

ದಕ್ಷಿಣ ಕನ್ನಡ , ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ಕಡಲಬಳಿ ತೆರಳದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಬಿರುಗಾಳಿ ಜೊತೆಗೆ ಭಾರಿ ಮಳೆಯಾಗುತ್ತಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ , ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ವಿಜಯನಗರ, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular