HomeKarnatakaBIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಹಾವೇರಿ, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ, ರಾಯಚೂರು, ಯಾದಗಿರಿ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ತುಮಕೂರು, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular