HomeLatest NewsBIG NEWS: ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಮತ್ತೆ ರೆಡ್ ಅಲರ್ಟ್ ಘೋಷಣೆ

BIG NEWS: ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಮತ್ತೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಉಪಸಾಗರದ ವಾಯುವ್ಯ ಭಾಗ ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದು ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ವಾಪಕವಾಗಿ ಮಳೆಯಾಗಲಿದೆ. ಇಂದಿನಿಂದ ಮೇ 30ರವರೆಗೂ ಧಾರಾಕಾರ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಹಾಸನ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳ ಅಂತ್ಯದವರೆಗೂ ಹಗುರ ಮಳೆಯಾಗಲಿದೆ.

ಮೇ 31ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular