HomeLatest NewsRAIN ALERT: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ!

RAIN ALERT: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಲವೆಡೆ ಅವಾಂತರಗಳು, ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಹವಾಮಾನ ಇಲಾಖೆ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮೈಸೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮಂಡ್ಯ, ಕೊಪ್ಪಳ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಇನ್ನು ಎರಡು ದಿನಗಳ ಕಾಲ ಸಾಧಾರಣ ಅಥವಾ ಹಗುರ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular