HomeKarnatakaBIG NEWS: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಆರೇಂಜ್...

BIG NEWS: ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟಕ್ಕೆ ಅವಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ದಾವಣಗೆರೆ, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ರಾಮನಗರ, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular