HomeLatest NewsBIG NEWS: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

BIG NEWS: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳ್ಲಲಿ ಮಳೆಯ ಅಬ್ಬರ ಜೋರಾಗಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಕಂಗಾಲಾಗಿದೆ. ಚಿಕ್ಕಮಗಳುರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಲೆಯಿಂದಾಗಿ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಎನ್ ಆರ್ ಪುರ, ಶೃಂಗೇರಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮಾವಾಗಿ ಈ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶ ಹೊರದಿಸಿದ್ದಾರೆ.

ಹಾಸನದ ಸಕಲೇಶಪುರ, ಆಲೂರು, ಅರಕಲಗೂಡು ಸೇರಿ 3 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ವರುಣಾರ್ಭಟ ಜೋರಾಗಿದೆ. ಇನ್ನೊಂದೆಡೆ ಬೆಳಗಾವಿಯಲ್ಲಿ ನಿನ್ನೆಯಿಂದ ನಿರಂತರವಾಗಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದ್ದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular