HomeAutoರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹೀತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಮಧ್ಯಾಹ್ನದಿಂದಲೇ ವರುಣಾರ್ಭಟ ಜೋರಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ, ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಒಂದೆಡೆ ಮಳೆ, ಮತ್ತೊಂದೆಡೆ ರಸ್ತೆಗಳಲ್ಲಿ ನೀರು ನಿಂತಿರುವುವ ಪರಿಣಾಮ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರಿನ ಜಯಪುರ, ಎನ್ ಆರ್ ಪುರ, ಮೂಡಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಸಿಡಿಲಬ್ಬರದೊಂದಿಗೆ ಮಳೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular