BREAKING: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ: ಮನೆಯಲ್ಲಿಯೇ ಇರಿ; ಸುರಕ್ಷಿತ ಕ್ರಮ ತೆಗೆದುಕೊಳ್ಳಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯಾಗಲಿದೆ. ವಿದ್ಯುತ್ ವ್ಯತ್ಯವಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗುಲಬರ್ಗ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಕೆಲ ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯವಾಗಲಿದೆ. ಮರದ ಕೊಂಬೆಗಳು ಬೀಳುವ ಸಾಧ್ಯತೆ ಇದೆ. ಜನರು ಮನೆಯಲ್ಲಿಯೇ ಇದ್ದು, ಕಿಟಕಿ ಹಾಗೂ ಬಾಗಿಲನ್ನು ಮುಚ್ಚಿ, ಸಾಧ್ಯವಾದರೆ ಪ್ರಯಾಣ ಮಾಡುವುದನ್ನು ತಪ್ಪಿಸಿ. ಸುರಕ್ಷಿತ ಆಶ್ರಯ ಪಡೆಯಿರಿ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣ ಅನ್ ಪ್ಲಗ್ ಮಾಡಿ, ವಿದ್ಯುತ್ ಶಕ್ತಿ ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ. ಜಲಮೂಲಗಳಿಂದ ತಕ್ಷಣ ಹೊರಬನ್ನಿ. ಪ್ರಯಾಣ ಮಾಡುತ್ತಿದ್ದರೆ ಎಚ್ಚರಿಕೆ ಇರಲಿ ಎಂದು ಸೂಚನೆ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read