HomeKarnatakaBIG NEWS: 20 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

BIG NEWS: 20 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular