HomeLatest NewsRAIN ALERT: ಬಹುತೇಕ ಕಡೆ ಒಣಹವೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ; ಅಲರ್ಟ್ ಘೋಷಣೆ

RAIN ALERT: ಬಹುತೇಕ ಕಡೆ ಒಣಹವೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಆರಂಭವಾಗಿದೆ. ಆದರೆ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರಿ ಮಳೆ, ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು. ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular