HomeLatest NewsBIG NEWS: ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ: ಕೊಟ್ಟಿಗೆಯಲ್ಲಿದ್ದ 3 ಹಸುಗಳು ಸಾವು

BIG NEWS: ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ: ಕೊಟ್ಟಿಗೆಯಲ್ಲಿದ್ದ 3 ಹಸುಗಳು ಸಾವು

ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟಕ್ಕೆ ಸಾಲು ಸಾಲು ಅನಾಹುತಗಲು ಸಂಭವಿಸುತ್ತಿವೆ. ಮೈಸೂರಿನಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಧಾರಾಕಾರ ಮಳೆಯಿಂದಾಗಿ ಮನೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಪಿರಿಯಾಪಟ್ಟಣದ ಅಂಕನಹಳ್ಳಿಯಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳು ಸಾವನ್ನಪ್ಪಿವೆ. ಮನೆಯಲ್ಲಿದ್ದ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ.

ಮುಷ್ತಾಕ್ ಅಹ್ಮದ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular