HomeLatest Newsಸಿನಿಮಾ ಟಿಕೆಟ್‌ಗಳ ಮೇಲೆ ವಿಧಿಸಿದ್ದ 200 ರೂ. ಮಿತಿ : ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ಮುಂದುವರಿಕೆ

ಸಿನಿಮಾ ಟಿಕೆಟ್‌ಗಳ ಮೇಲೆ ವಿಧಿಸಿದ್ದ 200 ರೂ. ಮಿತಿ : ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ಮುಂದುವರಿಕೆ

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ ಪೀಠದಲ್ಲಿ ದಾಖಲಾಗಿದ್ದ, ರಿಟ್ ಅಪೀಲು ಸಂಖ್ಯೆ: 1623/2025ರ (ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ, ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಇಂಡಿಯಾ) ಪ್ರಕರಣದಲ್ಲಿ ದಿನಾಂಕ:30.09.2025 ರಂದು ಮಾನ್ಯ ನ್ಯಾಯಾಲಯವು ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ ರೂ.200/-ಗಳ ಮಿತಿಗೆ ದಿನಾಂಕ:23.09.2025 ರಂದು ನೀಡಿದ ತಡೆಯಾಜ್ಞೆಯನ್ನು ಮುಂದುವರೆಸುವ ಜೊತೆಗೆ, ಈ ಕೆಳಕಂಡಂತೆ ಆದೇಶಿಸಿರುತ್ತದೆ.

ದಾಖಲೆಗಳ ನಿರ್ವಹಣೆ:
ಪ್ರತಿವಾದಿ ಸಂಖ್ಯೆ 1 ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು, ಮಾರಾಟವಾದ ಪ್ರತಿಯೊಂದು ಟಿಕೆಟ್ ಗೆ ಸಮಗ್ರ ಮತ್ತು ಲೆಕ್ಕಪರಿಶೋಧಿಸಬಹುದಾದ ದಾಖಲೆಗಳನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ. ದಾಖಲೆಗಳು ಈ ಕೆಳಗಿನವುಗಳನ್ನು ಒಳಗೊಂಡಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರಾಟದ ದಿನಾಂಕ ಮತ್ತು ಸಮಯ, ಆನ್ಲೈನ್ ಅಥವಾ ಭೌತಿಕ ಕೌಂಟರ್ ಗಳಲ್ಲಿ ಬುಕಿಂಗ್ ಮಾಡಿರುವ ವಿವರ, ಕ್ರೆಡಿಟ್/ಡೆಬಿಟ್ ಕಾರ್ಡ್, ಯುಪಿಐ ನೆಟ್ ಬ್ಯಾಂಕಿAಗ್ ಅಥವಾ ನಗದು ಪಾವತಿ ಮಾಡಿರುವ ವಿವರ, ಸಂಗ್ರಹಿಸಿದ ಮೊತ್ತ, ಜಿಎಸ್ಟಿ ಘಟಕ.

ಎಲ್ಲಾ ನಗದು ವಹಿವಾಟುಗಳಿಗೆ ಡಿಜಿಟಲ್ ಆಗಿ ಪತ್ತೆಹಚ್ಚಬಹುದಾದ ರಸೀದಿಗಳನ್ನು ನೀಡಬೇಕು ಮತ್ತು ಪ್ರತಿದಿನ ಕ್ಯಾಶ್ ರಿಜಿಸ್ಟರ್ ಗಳನ್ನು ಮಲ್ಟಿಫ್ಲೆಕ್ಸ್ ನ ವ್ಯವಸ್ಥಾಪಕರು ಪ್ರತಿ ಸಹಿ ಮಾಡಬೇಕು.


ಅರ್ಜಿದಾರರು ಈ ಮೇಲ್ಮನವಿ/ಅರ್ಜಿಯ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ, ಈ ನಿರ್ಬಂಧ ಬಾಕಿ ಇರುವ ಸಮಯದಲ್ಲಿ ಎಲೆಕ್ಟಾçನಿಕ್ ವಿಧಾನಗಳ ಮೂಲಕ (ಅನ್ವಯವಾಗುವ ಜಿಎಸ್ಟಿ ಹೊರತುಪಡಿಸಿ) ಸಂಗ್ರಹಿಸಿದ ಎಲ್ಲಾ ಮೊತ್ತವನ್ನು ಟಿಕೆಟ್ ಗಳನ್ನು ಬುಕ್ ಮಾಡಿದ ವೈಯಕ್ತಿಕ ಗ್ರಾಹಕರಿಗೆ ಬುಕಿಂಗ್ ಗೆ ಬಳಸುವ ಅದೇ ಪಾವತಿ ವಿಧಾನದ ಮೂಲಕ ಮರುಪಾವತಿಸಬೇಕು.

ಪ್ರತಿವಾದಿ ಸಂಖ್ಯೆ 1 ಇಂದಿನಿಂದ 45 ದಿನಗಳಲ್ಲಿ ಪರವಾನಗಿ ಪ್ರಾಧಿಕಾರಕ್ಕೆ ಮರುಪಾವತಿ ಪ್ರಕ್ರಿಯೆ ಯೋಜನೆಯನ್ನು ಅನುಮೋದನೆಗಾಗಿ ಸಲ್ಲಿಸಬೇಕು, ಇದು ಗ್ರಾಹಕರಿಗೆ ಮರುಪಾವತಿ ಮಾಡುವ ಕಾರ್ಯವಿಧಾನವನ್ನು ವಿವರಿಸುತ್ತದೆ. ಪರವಾನಗಿ ಪ್ರಾಧಿಕಾರದಿಂದ ಅನುಮೋದನೆಯ ನಂತರ ಅದನ್ನು ಅಂತಿಮ ಅನುಮೋದನೆಗಾಗಿ ಈ ನ್ಯಾಯಾಲಯದ ಮುಂದೆ ಇಡಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನನ್ವಯ, ಹಾಲಿ ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್ ಗಳನ್ನು ಭದ್ರವಾಗಿ ಕಾಯ್ದಿರಿಸಿಕೊಳ್ಳತಕ್ಕದ್ದು, ಹಾಗೆಯೇ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಗಳ ಮಾರಾಟದ ಸಂಪೂರ್ಣ ದಾಖಲೆಗಳನ್ನು ನಿರ್ವಹಿಸಬೇಕಾಗಿರುತ್ತದೆ.

ಈ ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ / ಅಪೀಲು ಸಂಬAಧದಲ್ಲಿ ನೀಡುವ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಲು ಅನುಕೂಲವಾಗುವಂತೆ ಅರ್ಜಿದಾರರು, ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಎಂದು ಒಳಾಡಳಿತ ಇಲಾಖೆಯ (ಸೆರೆಮನೆ ಮತ್ತು ಸಿನಿಮಾ) ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular