ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ 6 ಹಿರಿಯ ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಿಫಾರಸ್ಸು ಮಾಡಿದ 6 ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಕರ್ನಾಟಕ ಹೈಕೋರ್ಟ್ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ.
ಸುಪ್ರೀಂ ಕೋರ್ಟ್ ಶಿಫಾರಸ್ಸಿನಲ್ಲಿರುವ ವಕೀಲರ ಹೆಸರುಗಳು:
* ರಾಘವೇಂದ್ರ ಸೀತಾರಾಂ ಶ್ರೀವತ್ಸ: ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾಗಿ ದೇಶಾದ್ಯಂತ ಖ್ಯಾತಿ ಪಡೆದಿದ್ದಾರೆ.
* ಹೇಮಾ ಕುಲಕರ್ಣಿ: ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ದೀರ್ಘಕಾಲ ವಕಾಲತ್ತು ನಡೆಸಿರುವ ಇವರು, ಕಾನೂನು ಕ್ಷೇತ್ರದಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ.
* ಸುಬ್ರಮಣ್ಯ ರಂಗರಾವ್: ಹಿರಿಯ ವಕೀಲರು
* ತಡಗವಾಡಿ ಪ್ರಕಾಶ್ ವಿವೇಕಾನಂದ: ಕರ್ನಾಟಕ ಹೈಕೋರ್ಟ್ನ ವಕೀಲರಾಗಿ ಖ್ಯಾತಿ.
* ಬಕ್ಕೇಶ್ವರ ಪ್ರಮೋದ್: ಬೆಂಗಳೂರಿನ ಖ್ಯಾತ ಕಾನೂನು ತಜ್ಞ ಹಾಗೂ ಹಿರಿಯ ವಕೀಲರು.
* ಹೊಂಬೆಗೌಡ ಶಾಂತಿ ಭೂಷಣ್: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಕಾನೂನು ತಜ್ಞರಾಗಿದ್ದು, ಈ ಹಿಂದೆ ಕರ್ನಾಟಕ ಹೈಕೋರ್ಟ್ಗೆ ಭಾರತ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.
ಕೆಲ ದಿನಗಲ್ ಅಹಿಂದೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಅನುಮೋದನೆ ನೀಡಿತ್ತು. ಇದರೊಂದಿಗೆ ಹೈಕೋರ್ಟ್ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದ್ದು, ಮಂಜೂರಾದ ಒಟ್ಟು 62 ಹುದ್ದೆಗಳ ಪೈಕಿ ಇನ್ನೂ ಹಲವು ಹುದ್ದೆಗಳು ಖಾಲಿಯಾಗಿವೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

