ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಅಧಿಕಾರಿಗಳು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನೂತನ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು ಪೀಠಕ್ಕೆ ನೇಮಕವಾಗಿರುವ ಡಾ.ರಿಚರ್ಡ್ ವಿನ್ಸೆಂಟ್ ಡೊಸೋಜ ಹಾಗೂ ಡಾ.ಮಹೇಶ್ ವಾಳ್ವೇಕರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಲಬುರಗಿ ಪೀಠಕ್ಕೆ ನೇಮಕಗೊಂಡಿರುವ ಬಿ.ವೆಂಕಟೇಶ್ ಸಿಂಗ್ ದೇವರು ಮತ್ತು ಸಂವಿಧಾನದ ಹೆಸರಲ್ಲಿ ಅಧಿಕಾರ ಸ್ವೀಕರಿಸಿದರು.