HomeKarnatakaರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ: 3,500 ಜನರಿಗೆ ಉದ್ಯೋಗ

ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ: 3,500 ಜನರಿಗೆ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದ್ದು, 3,500 ಜನರಿಗೆ ಉದ್ಯೋಗ ದೊರಕಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ನಮ್ಮ ಸರ್ಕಾರದ ಉದ್ಯಮಸ್ನೇಹಿ ನೀತಿಗಳು, ಪೂರಕ ವಾತಾವರಣ ಸೃಷ್ಟಿ ಮತ್ತು ಕೌಶಲ್ಯ ಹೊಂದಿರುವ ದುಡಿಯುವ ವರ್ಗದಿಂದಾಗಿ ಕರ್ನಾಟಕವು ದೇಶದಲ್ಲೇ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸನ್ಸೇರಾ ಕಂಪನಿಯು 2,100 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಇದರಿಂದ 3,500 ಜನ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ. ಉದ್ಯಮಗಳಿಗೆ ಪೂರಕ ವಾತಾವರಣ ನಿರ್ಮಿಸಿ ಹೂಡಿಕೆ ಆಕರ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular