‘ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು : ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಯಾವುದೂ ಕೊಟ್ಟಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಈ ಬಾರಿಯ ಬಜೆಟ್ನಲ್ಲೂ ಯಾವುದೇ ಪ್ರಸ್ತಾಪವಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು,

ಅದೂ ಕೂಡ ಆಗಿಲ್ಲ. ಹೀಗಾಗಿ ಅನ್ಯಾಯವಾಗಿಲ್ಲ ಎಂದರೆ ಹೇಗೆ? ನಿರ್ಮಲಾ ಸೀತಾರಾಮನ್ ಅವರು ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆ. 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ, ಕಾರ್ಯಕ್ರಮಗಳಿಂದ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿದೆ. ಇನ್ನೇನು ಕೊಡುಗೆ ಕೊಡಬೇಕು? ನಿರ್ಮಲಾ ಸೀತಾರಾಮನ್ ಅವರೇ 2023-24 ನೇ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ₹5,300 ಕೋಟಿಗಳನ್ನು ಕೊಟ್ಟಿಲ್ಲ. ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು. ಎಲ್ಲಿದೆ ಈ ಅನುದಾನ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5,495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ ರೂ.3,000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ ಪ್ರದೇಶ, ಬಿಹಾರ ರಾಜ್ಯಗಳಿಗೆ ಭರಪೂರ ಅನುದಾನ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

https://twitter.com/siddaramaiah/status/1817851489857282510

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read