ಬೆಂಗಳೂರು: ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ತಪ್ಪದೇ ಪರಿಶೀಲಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ಯಾವುದೇ ತಪ್ಪು ಅಥವಾ ಬದಲಾವಣೆಗಳಿದ್ದಲ್ಲಿ ಸೆಪ್ಟೆಂಬರ್ 23, 2026ರೊಳಗೆ ಹಕ್ಕು ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಕರಡು ಮತದಾರರ ಪಟ್ಟಿಯನ್ನು ceo.karanataka.gov.inವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಿ ಹಾಗೂ ಹಕ್ಕು ಅಥವಾ ಆಕ್ಷೇಪಣೆಗಳನ್ನು voters.eci.gov.in ವೆಬ್ಸೈಟ್ ನಲ್ಲಿ ಸಲ್ಲಿಸಲು ಸೂಚಿಸಲಾಗಿದೆ. ಅಕ್ಟೋಬರ್ 27, 2026ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ.

