HomeLive NewsBIG NEWS: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

BIG NEWS: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜೂನ್ 4ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular