HomeKarnatakaಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಎಚ್ಚರಿಕೆ; ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಎಚ್ಚರಿಕೆ; ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದೆ. ಈ ನಡುವೆ ಬೆಂಗಳೂರು ಸೇರಿದತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಅಲರ್ಟ್ ಘೋಷಿಸಲಾಗಿದೆ. ಬೀದರ್ ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕೀ.ಮೀ ವೇದಲ್ಲಿ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಯಲ್ಲಿ ಟ್ರಫ್-ವಾತಾರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಸಮಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಜುಲೈ 11ರವರೆಗೂ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಜುಲೈ 10ರವರೆಗೆ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಹಾಸನ. ಕೋಲಾರ, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನ ಗಾಳಿ-ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular