HomeKarnatakaಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ: ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರ್ವಾವಳಿ ಜಿಲ್ಲೆಗಳಲ್ಲು ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಕರ್ವಾವಳಿ ಭಾಗಗಳಲ್ಲಿ ಮುಂಗಾರು ಚುರುಕಾಗಲಿದ್ದು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾದಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ತುಮಕೂರು, ಕೋಲಾರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular