HomeLatest NewsBIG NEWS: ಮುಂದಿನ 5 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಮುಂದಿನ 5 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳುರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ಮೇ 22ರವರೆಗೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಇನ್ನು ಮುಂದಿನ ಕೆಲ ದಿನಗಳ ಕಾಲ ಭಾರತದ ವಿವಿಧ ರಾಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.

ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳುರು, ಬೆಳಗಾವಿ, ಬೀದರ್, ಯಾದಗಿರಿ, ರಾಯಚೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular