BREAKING: ಬೆಳಗಾವಿಯಲ್ಲಿ ‘MES’ ಪುಂಡಾಟ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶ ಆರಂಭದ ದಿನವೇ ನಾಡದ್ರೋಹಿ ಎಂಇಎಸ್ ಪುಂಡರು ಪುಂದಾಟ ಮೆರೆದಿದ್ದು, ಕೊಲ್ಲಾಪುಅರದಲ್ಲಿ ಕರ್ನಾಟಕ ಬಸ್ ಗಳನು ತಡೆದು ಆಕ್ರೋಶ ವ್ಯಕ್ತಪಡಿಸಿವೆ. ಮತ್ತೊಂದೆಡೆ ನಿಷೇಧದ ನಡುವೆಯೂ ಮಹಾಮೇಳಾವ್ ನಡೆಸಲು ಬೆಳಗಾವಿಗೆ ಆಗಮಿಸುತ್ತಿದ್ದ ಎಂಇಎಸ್ ಪುಂದರನ್ನು ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಳಗಾವಿಯ ಅಥಣಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಕೊಲ್ಲಾಪುರದಲ್ಲಿ ಎಂಇಎಸ್ ಕಾರ್ಯಕರ್ತರು ಕರ್ನಾಟಕ ಬಸ್ ಗಳನ್ನು ತಡೆದಿದ್ದನ್ನು ಖಂಡಿಸಿ ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಮಹಾರಾಷ್ಟ್ರ ಬಸ್ ಗಳನ್ನು ತಡೆದು ಪ್ರತಿಭಟಿಸಿದ್ದಾರೆ. ಇದರಿಂದಾಗಿ ಎರಡೂ ರಾಜ್ಯಗಳ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೆಳಗಾವಿ ಅಧಿವೇಶನ ಹೊತ್ತಿನಲ್ಲೇ ಎಂಇಎಸ್ ಪುಂಡಾಟ ಬೆನ್ನಲ್ಲೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತವಾಗಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಸ್ ನಿಲ್ದಾಣದವರೆಗೆ ಮಾತ್ರ ಬಸ್ ಗಳು ಸಂಚರಿಸುತ್ತಿವೆ. ನಿಪ್ಪಾಣಿ ಬಸ್ ನಿಲ್ದಾಣದಲ್ಲೇ ಕೆ.ಎಸ್.ಆರ್.ಟಿ.ಸಿ ಬಸ್ ಗಳು ನಿಂತಿದ್ದು, ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ನೋಡಿಕೊಂಡು ಬಸ್ ಗಳನ್ನು ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read