ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ”, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ, ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ” ಈ ದತ್ತಿ ಪ್ರಶಸ್ತಿಗಳು ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.

2023 ನೇ ಸಾಲಿನ ಪ್ರಶಸ್ತಿಗಳು:

2023 ಜನವರಿಯಿಂದ ಡಿಸೆಂಬರ್-2023 ರವರೆಗೆ, ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2023”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2023”, ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2023” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ “ಅಭಿಮನ್ಯು ದತ್ತಿ ಪ್ರಶಸ್ತಿ -2023” ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

2024 ನೇ ಸಾಲಿನ ಪ್ರಶಸ್ತಿಗಳು:

2024 ಜನವರಿಯಿಂದ ಸೆಪ್ಟೆಂಬರ್ 2024 ರವರೆಗೆ ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2024”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2024”, ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿಯಾದ ವರದಿಗೆ “ಅಭಿಮನ್ಯು ಪ್ರಶಸ್ತಿ -2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿದ್ದು, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರ ಪಡೆದು ಕಳುಹಿಸಬೇಕು.

ಲೇಖನ-ವರದಿಗಳನ್ನು ನವೆಂಬರ್ 20 ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ “ಅಭಿಮಾನಿ ಪ್ರಶಸ್ತಿ-2023”, “ಅಭಿಮಾನಿ ಪ್ರಶಸ್ತಿ-2024” ಹಾಗೂ “ಮೈಸೂರು ದಿಗಂತ ಪ್ರಶಸ್ತಿ-2023”, “ಮೈಸೂರು ದಿಗಂತ ಪ್ರಶಸ್ತಿ-2024” “ಪ್ರಜಾ ಸಂದೇಶ ಪ್ರಶಸ್ತಿ-2023”, “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ಅಭಿಮನ್ಯು ಪ್ರಶಸ್ತಿ -2023”, “ಅಭಿಮನ್ಯು ಪ್ರಶಸ್ತಿ-2024” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್.ಅಂಬೇಡ್ಕರ್ ಬೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ kmaprashast@gmail.com ಗೆ ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read