HomeLatest Newsಕರ್ನಾಟಕ ಮಾಧ್ಯಮ ಅಕಾಡೆಮಿ ವಿವಿಧ ದತ್ತಿನಿಧಿ ಪ್ರಶಸ್ತಿಗೆ ಲೇಖನಗಳ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ವಿವಿಧ ದತ್ತಿನಿಧಿ ಪ್ರಶಸ್ತಿಗೆ ಲೇಖನಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು  ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ  ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ  ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ.

ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್‌ 25ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ – ವರದಿಯನ್ನು ಕಳುಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ದೈನಿಕ- ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು(ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು(ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ- 2025’, ‘ಮೈಸೂರು ದಿಗಂತ ಪ್ರಶಸ್ತಿ-2025’, “ಅಭಿಮನ್ಯು ಪ್ರಶಸ್ತಿ-2025” ಹಾಗೂ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2025ʼ ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ ನವೆಂಬರ್‌ 12ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular