ಸಾವರ್ಕರ್ ವಿವಾದಕ್ಕೆ ತಮ್ಮನ್ನು ಎಳೆದು ತಂದ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಬಿಜೆಪಿಯಿಂದ ಅನಗತ್ಯವಾಗಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು(ತಬಸ್ಸುಮ್) ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಾವರ್ಕರ್ ಕುರಿತಾಗಿ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಅವರ ಪತ್ನಿ ಟಬು ರಾವ್ ಅವರ ಹೆಸರನ್ನು ಬಿಜೆಪಿ ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬೂ ರಾವ್ ಈ ಬಗ್ಗೆ ಸಂಬಂಧಿಸಿದವರನ್ನು ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸುಮ್ ಅವರು ಹೇಳಿದ್ದರೋ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ ರಾಜಕೀಯ ಕೆಸರೆರಚಾಟದಲ್ಲಿ ದಿನೇಶ್ ಗುಂಡೂರಾವ್ ಅವರ ಕುಟುಂಬವನ್ನು ಎಳೆದು ತಂದಿರುವ ಬಿಜೆಪಿ ಅತ್ಯಂತ ಕೆಳಹಂತಕ್ಕೆ ಇಳಿದಿದೆ ಎಂದು ಟೀಕಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read