BIG NEWS: ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಸ್ಪೀಕರ್

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ.

ಅಧಿವೇಶನದ ಮೊದಲ ದಿನವಾದ ಇಂದು, ವಿಧನಾಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಲಾಯಿತು. ಚಾಮರಾಜನಗರದ ಮಾಜಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ನಟ, ನಿರ್ಮಾಪಕ ದ್ವಾರಕೀಶ್, ನಟಿ, ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ ಸೇರಿದಂತೆ ಅಗಲಿದ ಗಣ್ಯರಿಗೆ ಸ್ಪೀಕರ್ ಯು.ಟಿ.ಖಾದರ್ ಸಂತಾಪ ಸೂಚಿಸಿದರು.

ಇಂದಿನಿಂದ ಜುಲೈ 26ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಮೂಡಾ ಹಗರಣಗಳ ಚರ್ಚೆ ನಡುವೆ ಅಧಿವೇಶನ ಆರಂಭವಾಗಿದ್ದು, ಹಗರಣಗಳನ್ನೇ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಡಳಿತಾರೂಢ ಕಾಂಗ್ರೆಸ್ ನಾಯಕರನ್ನು ಕಟ್ಟಿಹಾಕಲು ಸಿದ್ಧತೆ ನಡೆಸಿವೆ. ಇದೇ ವಿಚಾರ ಮುಂದಿಟ್ಟು ಸದನದ ಒಳಗೂ ಹೊರಗೂ ಹೋರಾಟ ಆರಂಭಿಸುವುದಾಗಿ ಈಗಗಲೇ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read