HomeKarnataka48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ ಅನ್ನದಾತ ತೊಡಗಿಕೊಂಡಿದ್ದಾನೆ.

ಜೂನ್ 2ರಿಂದ ರಾಜ್ಯಾದ್ಯಂತ ಮುಂಗಾರು ಮಳೆ ಆರಂಭವಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ. ದಕ್ಷಿಣ ಒಳನಡಿನ ಕೆಲವೆಡೆ ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular