HomeKarnatakaBIG NEWS: ರಾಜ್ಯದ ಮೂರು ಕಡೆ NIA ದಾಳಿ: ಮೂವರು ವಶಕ್ಕೆ

BIG NEWS: ರಾಜ್ಯದ ಮೂರು ಕಡೆ NIA ದಾಳಿ: ಮೂವರು ವಶಕ್ಕೆ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ – ಎನ್ ಐಎ ಅಧಿಕಾರಿಗಳು ರಾಜ್ಯದ ಮೂರು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಕೇರಳ ಮೂಲದ ಇಡುಕ್ಕಿ ನಿವಾಸಿ ಸುಳ್ಯದ ಕಲ್ಮಡ್ಕ ಗ್ರಾಮದ ಬಿಜು ಅಬ್ರಾಹಂ ಹಾಗೂ ಅತ್ತಾವರ ಗ್ರಾಮದ ನಬೀದ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಾಸೀರ್ ಖಾನ್ ಎಂಬಾತನಿಗಾಗಿ ಹುಡುಕಾಟ ನಡೆಸಲಾಗಿದೆ. ಎನ್ ಐಎನ ಎರಡು ತಂಡಳು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಅಂಕೋಲಾಕ್ಕೆ ಭೇಟಿ ನೀಡಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ತಮಿಳುನಾಡು, ತೆಲಂಗಾಣ, ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳದ ವಿವಿಧೆಡೆಗಳಲ್ಲಿಯೂ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular