HomeKarnatakaರಾಜ್ಯದಲ್ಲಿ ಬಡವರಿಗೆ 50 ಸಾವಿರ ನಿವೇಶನ ನೀಡಲು ಮಹತ್ವದ ಕ್ರಮ

ರಾಜ್ಯದಲ್ಲಿ ಬಡವರಿಗೆ 50 ಸಾವಿರ ನಿವೇಶನ ನೀಡಲು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಬಡವರಿಗೆ ನಿವೇಶನ ನೀಡಲು ಸರ್ಕಾರ ಗುರಿ ಇಟ್ಟುಕೊಂಡಿದೆ. ಪ್ರತಿ ಜಿಲ್ಲೆಯಲ್ಲಿ 50,000 ನಿವೇಶನಗಳನ್ನು ಸಿದ್ಧಪಡಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಭೂಮಿ ಗುರುತಿಸುವ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದಲ್ಲಿ ನಿವೇಶನಗಳನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಇಂದು ವಿಧಾನಸೌಧದ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಭೂ ದಾಖಲೆಗಳ ಉಪನಿರ್ದೇಶಕರು/ಸಹಾಯಕ ನಿರ್ದೇಶಕರೊಂದಿಗೆ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ಸರ್ಕಾರದ ಭೂಮಿ ರಕ್ಷಣೆಯು ಪ್ರಮುಖ ಜವಾಬ್ದಾರಿಯಾಗಿದೆ. ಬೆಂಗಳೂರು ಸುತ್ತಮುತ್ತ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು. ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಕಚೇರಿಗಳಲ್ಲಿ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ ಎಂಬ ಆರೋಪಗಳು ಬರುತ್ತಿವೆ. ಸಾರ್ವಜನಿಕರಿಗೆ ಕಡ್ಡಾಯ ಲಭ್ಯವಿರಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಜನಸ್ನೇಹಿ ಅಧಿಕಾರಿಗಳಾಗಿ ಕೆಲಸ‌‌ ಮಾಡಬೇಕು. ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದರೆ ಮುಲಾಜಿಲ್ಲದೆ‌ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಇಲಾಖೆಯ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಡ್ತಿ ನೀಡಲಾಗಿದೆ. ಬಾಕಿ ಉಳಿದಿರುವ ತಹಶೀಲ್ದಾರ್ ವೃಂದದಿಂದ ಉಪವಿಭಾಗಾಧಿಕಾರಿ ಹುದ್ದೆಗೆ ಶೀಘ್ರ ಬಡ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಪಿ. ಎಸ್‌. ಕಾಂತಾರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ‌.ಎನ್.ಅನುರಾಧ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಶೀಘ್ರದಲ್ಲೇ 2ನೇ ಹಂತದ ಬರ ಪೀಡಿತ ತಾಲ್ಲೂಕುಗಳ ಘೋಷಣೆ

ರಾಜ್ಯದಲ್ಲಿ ಬರ ಪರಿಶೀಲನೆ ಇನ್ನೂ ಮುಕ್ತಾಯವಾಗಿಲ್ಲ. ಹಂತ ಹಂತವಾಗಿ ಈಗಲೂ ನಡೆಯುತ್ತಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಎರಡನೇ ಹಂತದ ಪರಿಶೀಲನೆ ಈಗ ನಡೆಯುತ್ತಿದೆ. 25 ತಾಲ್ಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಘೋಷಣೆಗೆ ಅರ್ಹತೆ ಪಡೆದಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬರ ಪೀಡಿತ ಪ್ರದೇಶಗಳ ಘೋಷಣೆ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಮಾಡುತ್ತಿದ್ದೇವೆ. ಮಳೆಗಾಲ ಮುಕ್ತಾಯ ಆಗುವವರೆಗೂ ಪರಿಶೀಲನೆ ಮುಂದುವರಿಯುತ್ತದೆ. ಕಳೆದ ಬಾರಿ ಸುಮಾರು 200 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿತ್ತು. ಈ ಬಾರಿಯೂ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಿಸಲ್ಪಡುವ ಪರಿಸ್ಥಿತಿ ಇದೆ. ಕರಾವಳಿ ಪ್ರದೇಶವನ್ನು ಹೊರತುಪಡಿಸಿ ಉಳಿದೆಲ್ಲೆಡೆ ಬರ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

ಬಗರ್‌ ಹುಕುಂ ಅರ್ಜಿ

ಬಗರ್‌ ಹುಕುಂ ಅರ್ಜಿದಾರರಿಗೆ ಸಕಾಲಿಕ ನೆರವಾಗಲು ಅರ್ಜಿಗಳ ವಿಲೇವಾರಿಗೆ ವೇಗವನ್ನೊದಗಿಸಲಾಗಿದೆ. ಇದುವರೆಗೆ ಸ್ವೀಕರಿಸಲಾದ ಸುಮಾರು 14 ಲಕ್ಷ ಅರ್ಜಿಗಳ ಪೈಕಿ 4,11,290 ಅರ್ಜಿಗಳನ್ನು ಈಗಾಗಲೇ ಗ್ರಾಮ ಆಡಳಿತಾಧಿಕಾರಿ ಹಂತದಲ್ಲಿ ಪರಿಶೀಲಿಸಲಾಗಿದೆ. ತಹಶೀಲ್ದಾರರಿಗೆ ಮಾಸಿಕ ಗುರಿ ನೀಡುವ ಮೂಲಕ ಇನ್ನುಳಿದ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular