HomeLatest NewsBIG NEWS: ಒಲಂಪಿಕ್ಸ್ ನಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ: ಚಿನ್ನದ ಪದಕ ಪಡೆದವರಿಗೆ...

BIG NEWS: ಒಲಂಪಿಕ್ಸ್ ನಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ: ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ: ಸಿಎಂ ಘೋಷಣೆ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ನೀಡಲಾಗುವುದು. ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular