HomeKarnatakaನಾಳೆಯಿಂದ ಸೆ.30 ರವರೆಗೆ ಬೆಂಗಳೂರಿನಲ್ಲಿ ‘ಕರ್ನಾಟಕ ಪರ್ವ-2026’ ಬೃಹತ್ ಉತ್ಸವ

ನಾಳೆಯಿಂದ ಸೆ.30 ರವರೆಗೆ ಬೆಂಗಳೂರಿನಲ್ಲಿ ‘ಕರ್ನಾಟಕ ಪರ್ವ-2026’ ಬೃಹತ್ ಉತ್ಸವ

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಕುಶಲಕರ್ಮಿಗಳ ಕಲೆ, ಕೌಶಲ್ಯ, ಕರಕುಶಲ ಉತ್ಪನ್ನಗಳು ಹಾಗೂ ಉದ್ಯಮಶೀಲತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ‘ಕರ್ನಾಟಕ ಪರ್ವ-2026’ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.

 ಸೆಪ್ಟೆಂಬರ್ 26ರಿಂದ 30ರವರೆಗೆ ಬೆಂಗಳೂರಿನ ಅರಮನೆ ಮೈದಾನದ ‘ತ್ರಿಪುರ ವಾಸಿನಿ’ಯಲ್ಲಿ ನಡೆಯಲಿರುವ ಮೇಳಕ್ಕೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

 ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು,  ಅಲ್ಪಸಂಖ್ಯಾತ ಸಮುದಾಯದ ಕುಶಲಕರ್ಮಿಗಳ ಕಲೆ, ಕೌಶಲ್ಯ, ಕರಕುಶಲ ಉತ್ಪನ್ನಗಳು ಹಾಗೂ ಉದ್ಯಮಶೀಲತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸೆಪ್ಟೆಂಬರ್ 26 ರಿಂದ 30 ರವರೆಗೆ ‘ಕರ್ನಾಟಕ ಪರ್ವ-2026’ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದ ‘ತ್ರಿಪುರ ವಾಸಿನಿ’ಯಲ್ಲಿ ಆಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11.00 ಗಂಟೆಗೆ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನ್ಯ ಸಚಿವರು ಉಪಸ್ಥಿತರಿರಲಿದ್ದಾರೆ.

 180ಕ್ಕೂ ಹೆಚ್ಚು ಸ್ಟಾಲ್‌ಗಳು: ರಾಜ್ಯದ ವಿವಿಧ ಭಾಗಗಳ ಅಲ್ಪಸಂಖ್ಯಾತ ಕುಶಲಕರ್ಮಿಗಳು ತಯಾರಿಸಿದ ವಿಶಿಷ್ಟ ಕರಕುಶಲ ಹಾಗೂ ಸಾಂಪ್ರದಾಯಿಕ ಉತ್ಪನ್ನಗಳನ್ನು ಒಂದೇ ವೇದಿಕೆಯಲ್ಲಿ ಪ್ರದರ್ಶಿಸಿ, ವಿಶಾಲ ಮಾರುಕಟ್ಟೆ ಮತ್ತು ನೇರ ಗ್ರಾಹಕ ಸಂಪರ್ಕ ಕಲ್ಪಿಸಲಾಗುವುದು.

 ಕುಶಲಕರ್ಮಿಗಳಿಗೆ ಇ-ಕಾಮರ್ಸ್, ಡಿಜಿಟಲ್ ಮಾರ್ಕೆಟಿಂಗ್, ಆಧುನಿಕ ವ್ಯಾಪಾರ ಪದ್ಧತಿಗಳು, ಮಾರುಕಟ್ಟೆ ವಿಸ್ತರಣೆ ಮತ್ತು ಉದ್ಯಮ ಸಂಪರ್ಕಕುರಿತು ಜ್ಞಾನವರ್ಧಕ ತರಬೇತಿ ಹಾಗೂ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಕರಕುಶಲ ಉತ್ಪನ್ನಗಳ ಮಾರಾಟದ ಜೊತೆಗೆ ಆಕರ್ಷಕ ಸಾಂಸ್ಕೃತಿಕ ಸಂಜೆಗಳು ಹಾಗೂ ವೈವಿಧ್ಯಮಯ ಆಹಾರ ಮೇಳವನ್ನು ಆಯೋಜಿಸಲಾಗಿದೆ.

 ಉದ್ದೇಶ

 “ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ, ಕುಶಲಕರ್ಮಿಗಳ ಬದುಕು ಸಮೃದ್ಧವಾಗಲಿ” ಹಾಗೂ “ಕರ್ನಾಟಕ ಪರ್ವ – ಸ್ವಾಭಿಮಾನ ಮತ್ತು ಸ್ವಾವಲಂಬನೆಯ ದಾರಿಯಲ್ಲಿ” ಎಂಬ ಆಶಯ ಮತ್ತು ಸಂದೇಶದೊಂದಿಗೆ ಈ ಕಾರ್ಯಕ್ರಮ ರೂಪುಗೊಂಡಿದೆ. ಕುಶಲಕರ್ಮಿಗಳ ಆರ್ಥಿಕ ಸ್ವಾವಲಂಬನೆ ಹೆಚ್ಚಿಸುವುದು ಮತ್ತು ಸಾಂಪ್ರದಾಯಿಕ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಸಾರ್ವಜನಿಕರು, ಕಲಾಭಿಮಾನಿಗಳು, ಉದ್ಯಮಿಗಳು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಬೇಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೋರಿದ್ದಾರೆ.

ಶಿವಮೊಗ್ಗದಲ್ಲಿ ಸೆಪ್ಟೆಂಬರ್ 28 ರಂದು ‘ಉದ್ಯೋಗ ಮೇಳ’: ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 10:00 ಗಂಟೆಗೆ ನೇರ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.

ದಿನಾಂಕ: 28-09-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ 18 ರಿಂದ 35 ವರ್ಷ ಒಳಗಿನ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 ಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular