HomeLatest NewsSHOCKING: ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ರಾಜ್ಯದಲ್ಲಿ ಆರಕ್ಷಕರೇ ಭಕ್ಷಕರಾದ...

SHOCKING: ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ರಾಜ್ಯದಲ್ಲಿ ಆರಕ್ಷಕರೇ ಭಕ್ಷಕರಾದ ಕಥೆ

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ಯಿತ್ತಿರುವಂತಿದೆ.

ಆರಕ್ಷಕರೇ ಭಕ್ಷಕರಾಗುತ್ತಿರುವ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ರಕ್ಷಣೆ ಹೇಗೆ ಸಾಧ್ಯ? ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ವಿಧಾನಪರಿಷತ್ ನಲ್ಲಿ ಸ್ವತಃ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹ ಸಚಿವರು ಅಂಕಿ-ಅಂಶಗಳ ಸಮೇತ ವಿವರಿಸುತ್ತಿದ್ದಂತೆ ಶಾಸಕ ಶರವಣ ಆತಂಕ ವ್ಯಕ್ತಪಡಿಸಿದ್ದು, ಇದ್ ಬೇಲಿಯೇ ಎದ್ದು ಹೊಲ ಮೆಂದ, ರಕ್ಷಕರರೇ ಭಕ್ಷಕರಾಗುತ್ತಿದ್ದಂತೆ ಇದೆ. ಈ ರೀತಿಯಾದರೆ ಪೊಲೀಸರ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಕೇವಲ ಸಸ್ಪೆಂಡ್ ಮಾಡಿದರೆ ಸಾಲದು ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾದ್ದ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular