PSI ನೇಮಕಾತಿ ಹಗರಣ; ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಜನರಿಗೆ ಜಾಮೀನು ಮಂಜೂರು

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪಿ ಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಕಲಬುರ್ಗಿಯ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕಿಂಗ್ ಪಿನ್ ದುವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಡಿವೈ ಎಸ್ ಪಿ ಮಲ್ಲಿಕಾರ್ಜುನ ಸೇರಿದಂತೆ 26 ಆರೋಪಿಗಳಿಗೆ ಕಲಬುರ್ಗಿ ಸೆಷನ್ ಕೋರ್ಟ್ ನ ಜಡ್ಜ್ ಕೆ.ಬಿ.ಪಾಟೀಲ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಪಿ ಎಸ್ ಐ ಹಗರಣದಲ್ಲಿ ಈವರೆಗೆ ಒಟ್ಟು 36 ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read