HomeLatest NewsBIG NEWS: ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ: ನೋಡಲ್ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

BIG NEWS: ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ: ನೋಡಲ್ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಯೋಜನೆ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯಶಸ್ವಿಗಾಗಿ ನೋಡಲ್ ಅಧಿಕಾರಿಗಳನ್ನು ರಾಅಜ್ಯ ಸರ್ಕಾರ ನೇಮಕ ಮಾಡಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬೂ ಜಿ. ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರ ಸೂಚಿಸಿದ ಕಡೆಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್ ಆರ್ ಹಣದಲ್ಲಿ ನಿರ್ಮಿಸಿ ತ್ವರಿತವಾಗಿ ಕಾರ್ಯಗತಗೊಳಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular