ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಆಗಸ್ಟ್ 7ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದೆ.
ಬೆಂಗಳೂರಿನಲ್ಲಿ ಆಗಸ್ಟ್ 5ರವರೆಗೂ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಉತ್ತರ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.