HomeLatest NewsRAIN ALERT: ಸೆ.21ರವರೆಗೂ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

RAIN ALERT: ಸೆ.21ರವರೆಗೂ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಹಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular