HomeLatest NewsRAIN ALERT: ರಾಜ್ಯದಲ್ಲಿ ಮತ್ತೆ ಚುರುಕುಕೊಂಡ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಮತ್ತೆ ಚುರುಕುಕೊಂಡ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ರಾಮನಗರ, ಚಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಜೋರು ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular